‘ವಾಮನ’ ಅವತಾರದಲ್ಲಿ ಬಜಾರ್ ಹುಡ್ಗ ಧನ್ವೀರ್ ದರ್ಶನ!

masthmagaa.com:

ಬಜಾರ್ ಹೀರೋ ಶೋಕ್ದಾರ್ ಧನ್ವೀರ್ ಗೌಡ ನಟನೆಯ ಮೂರನೇ ಸಿನಿಮಾ ಅನೌನ್ಸ್ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಧನ್ವೀರ್ ಗೌಡ ನಟಿಸ್ತಿರುವ ಮೂರನೇ ಸಿನಿಮಾದ ಟೈಟಲ್ ಅನಾವರಣಗೊಂಡಿದೆ. ವಾಮನ ಎಂದು ಸಿನಿಮಾಗೆ ಶೀರ್ಷಿಕೆ ಫಿಕ್ಸ್ ಆಗಿದ್ದು, ಜೊತೆಗೆ ಫಸ್ಟ್ ಲುಕ್ ಕೂಡ ಬಿಡುಗಡೆಯಾಗಿದೆ.

ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿರುವ ಶಂಕರ್ ರಾಮನ್ ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ತಮ್ಮ ಸಿನಿಮಾ ಬದುಕಿನ 13 ವರ್ಷದ ಅನುಭವವನ್ನೂ ಈ ಸಿನಿಮಾಗೆ ಧಾರೆ ಎರೆಯುತ್ತಿರುವ ಶಂಕರ್ ರಾಮನ್, ಮಾಫಿಯಾ ಲೋಕದ ಕಥೆ ಜೊತೆ ಆಕ್ಷನ್ ಎಂಟರ್ ಟ್ರೈನರ್ ವಾಮನ ಸಿನಿಮಾವನ್ನು ಧನ್ವೀರ್ ಗೆ ಸಿದ್ಧಪಡಿಸಿದ್ದಾರೆ.

ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಪ್ರೊಡಕ್ಷನ್ ನಡಿ ಧನ್ವೀರ್ ಮೂರನೇ ಸಿನಿಮಾಗೆ ಚೇತನ್ ಕುಮಾರ್ ಗೌಡ ಬಂಡವಾಳ‌ ಹೂಡಲಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ವಾಮನ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಅನಾವರಣಗೊಂಡಿದೆ.

-masthmagaa.com

Contact Us for Advertisement

Leave a Reply