ಬಿಬಿಎಂಪಿಯಲ್ಲಿ ಕೈ-ದಳ ಮೈತ್ರಿ..ಬಿಜೆಪಿಯಲ್ಲಿ ಇನ್ನೂ ಗೊಂದಲ..!

ಇವತ್ತು ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಯಲಿದ್ದು, ಬಿಬಿಎಂಪಿಯಲ್ಲಿ ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧರಿಸಿದೆ. ಮೈತ್ರಿ ಅನ್ವಯ ಕಾಂಗ್ರೆಸ್‍ಗೆ ಮೇಯರ್ ಸ್ಥಾನ ಹಾಗೂ ಜೆಡಿಎಸ್‍ಗೆ ಉಪ ಮೇಯರ್ ಸ್ಥಾನ ಹಂಚಿಕೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ದೋಸ್ತಿಗಳಿಂದ ದತ್ತಾತ್ರೇಯ ವಾರ್ಡ್ ಸದಸ್ಯರಾದ ಸತ್ಯನಾರಾಯಣರನ್ನು ಮೇಯರ್ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಇನ್ನು ಉಪಮೇಯರ್ ಸ್ಥಾನಕ್ಕೆ ಜೆಡಿಎಸ್ ಶಕ್ತಿ ಗಣಪತಿ ವಾರ್ಡ್ 74ರ ಪಾಲಿಕೆ ಸದಸ್ಯೆ ಗಂಗಮ್ಮ ರಾಜಣ್ಣ ಅವರಿಗೆ ನಾಮಪತ್ರ ಸಲ್ಲಿಸಲು ಜೆಡಿಎಸ್ ವರಿಷ್ಠರು ಸೂಚನೆ ನೀಡಿದ್ದಾರೆ. ಇನ್ನು ಮೆಯರ್ ಆಯ್ಕೆ ಸಂಬಂಧ ತಡರಾತ್ರಿವರೆಗೂ ಬಿಜೆಪಿ ಸಭೆ ನಡೆಸಿದೆ. ಆದ್ರೆ ಯಾರ ಸ್ಪರ್ಧಿಸುತ್ತಾರೆ ಅನ್ನೋದು ಇನ್ನೂ ಅಂತಿಮವಾಗಿಲ್ಲ. ಪದ್ಮನಾಭರೆಡ್ಡಿ, ಗೌತಮ್, ಹೆಸರು ರೇಸ್‍ನಲ್ಲಿದ್ದು, ಗೌತಮ್ ಕಣಕ್ಕಿಳಿಯೋ ಸಾಧ್ಯತೆ ಹೆಚ್ಚಾಗಿದೆ. ಇನ್ನು ಉಪಮೇಯರ್ ಸ್ಥಾನಕ್ಕೆ ವಿಜಯನಗರದ ಮಹಾಲಕ್ಷ್ಮಿ, ಬೊಮ್ಮನಹಳ್ಳಿಯ ಗುರುಮೂರ್ತಿ ಹೆಸರು ಕೇಳಿಬಂದಿದೆ.

Contact Us for Advertisement

Leave a Reply