BCCI ಬಾಸ್‌ಗಳ ಪಾಕಿಸ್ತಾನ್‌ ಟೂರ್!‌ ನಾನ್‌ ಬರಲ್ಲ ಎಂದ ಜಯ್‌ ಶಾ!

masthmagaa.com:

2023ರ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಆತಿಥ್ಯವನ್ನ ಶ್ರೀಲಂಕಾ ಹಾಗೂ ಪಾಕಿಸ್ತಾನ ವಹಿಸಿವೆ. ಈ ಹಿನ್ನಲೆಯಲ್ಲಿ ಪಾಕಿಸ್ತಾನದಲ್ಲಿ ನಡೆಯುವ ಟೂರ್ನಿಯ ಕೆಲವು ಪಂದ್ಯಗಳನ್ನ ವೀಕ್ಷಿಸಲು BCCI ಅಧ್ಯಕ್ಷ ರೋಜರ್‌ ಬಿನ್ನಿ ಹಾಗೂ ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಅಂತ ತಿಳಿದು ಬಂದಿದೆ. ಪಾಕಿಸ್ತಾನದಲ್ಲಿ ಏಷ್ಯಾ ಕಪ್‌ನ 4 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಭಾಗವಹಿಸುವಂತೆ ಬಿಸಿಸಿಐಗೆ PCB ಆಹ್ವಾನ ನೀಡಿದೆ. ಹೀಗಾಗಿ ಸೆಪ್ಟೆಂಬರ್‌ 4 ರಂದು ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಅಂದ್ಹಾಗೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಸೆಪ್ಟಂಬರ್‌ 2ರಂದು ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಪಂದ್ಯ ನೋಡಲು ಬಿನ್ನಿ, ಶುಕ್ಲಾ ಹಾಗೂ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವ್ರು ತೆರಳಲಿದ್ದಾರೆ. ಆದ್ರೆ ಜೈ ಶಾ ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸಿದ್ದಾರೆ ಅಂತ ತಿಳಿದು ಬಂದಿದೆ.

-masthmagaa.com

Contact Us for Advertisement

Leave a Reply