ಬೆಳಗಾವಿ ಮಹಿಳೆ ಹಲ್ಲೆ ಪ್ರಕರಣ: ಸಂತ್ರಸ್ತೆ ಭೇಟಿಯಾದ ಬಿಜೆಪಿ ನಿಯೋಗ

masthmagaa.com:

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಶುಕ್ರವಾರ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ ಬೆನ್ನಲ್ಲೇ ಇಂದು ದೆಹಲಿ ಬಿಜೆಪಿ ನಿಯೋಗ ಆಸ್ಪತ್ರೆಗೆ ಭೇಟಿ ನೀಡಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ. ಬಳಿಕ ಘಟನಾ ಸ್ಥಳ ವಂಟಮೂರಿ ಹಾಗೂ ಕಾಕತಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದೆ ಅಂತ ವರದಿಯಾಗಿದೆ. ಪ್ರಕರಣ ಸಂಬಂಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ಕೊಡುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವ್ರು ಶುಕ್ರವಾರ ಸಂಜೆಯೇ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೂ ಐವತ್ತು ಸಾವಿರ ರೂ. ಪರಿಹಾರ ಘೋಷಿಸಿಲಾಗಿದೆ. ಅಂದ್ಹಾಗೆ ಈ ಬಿಜೆಪಿ ನಿಯೋಗ ಅಂದ್ರೆ ಸತ್ಯ ಶೋಧನಾ ಟೀಮ್‌ನಲ್ಲಿ ಸಂಸದರಾದ ಅಪರಾಜಿತ್ ಸಾರಂಗಿ, ಸುನೀತಾ ದುಗ್ಗಲ್, ರಂಜಿತಾ ಕೋಳಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಕ್ರಾ ಇದ್ದಾರೆ ಅಂತ ತಿಳಿದು ಬಂದಿದೆ.

-masthmagaa.com

Contact Us for Advertisement

Leave a Reply