ಏಪ್ರಿಲ್ 20ರ ನಂತರ SSLC ಪರೀಕ್ಷೆ: ಶಿಕ್ಷಣ ಇಲಾಖೆ ಆದೇಶ

masthmagaa.com:

ಎಸ್​ಎಸ್​ಎಲ್​ಸಿ ಪರೀಕ್ಷೆಗಳು ರದ್ದಾಗೋದಿಲ್ಲ ಅಂತ ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಹಿಂದೆ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಾರ್ಚ್​ 31ರವರೆಗೆ ಎಸ್​ಎಸ್​​ಎಲ್​ಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ದೇಶವನ್ನು ಲಾಕ್​ಡೌನ್ ಮಾಡಲಾಗಿರೋದ್ರಿಂದ ಏಪ್ರಿಲ್ 20ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, 7ರಿಂದ 9ನೇ ತರಗತಿಯ ಪರೀಕ್ಷೆಗಳು, ಎಸ್​​ಎಸ್​​ಎಲ್​​ಸಿ  ಪರೀಕ್ಷೆ, ಆರ್​​​ಟಿಇ ಅಡಿಯಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ ಹಾಗೂ ಶಾಲೆಗಳಲ್ಲಿ 2020-21ನೇ ಸಾಲಿಗೆ ದಾಖಲಾತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಏಪ್ರಿಲ್ 20ರ ನಂತರ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

-masthmagaa.com

Contact Us for Advertisement

Leave a Reply