ಇಡೀ ದೇಶದಲ್ಲೇ ಅತಿ ಹೆಚ್ಚು ಸಕ್ರಿಯ ಕೇಸ್ ಇರೋ ಜಿಲ್ಲೆ ಬೆಂಗಳೂರು:

masthmagaa.com:

ರಾಜ್ಯದಲ್ಲಿ ಕೊರೋನಾ ಹಾವಳಿ ಮುಂದುವರಿದಿದ್ದು, ಅದ್ರಲ್ಲೂ ರಾಜಧಾನಿ ಬೆಂಗಳೂರಿನ ಪರಿಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ನಗರವೊಂದರಲ್ಲೇ ಒಂದೂವರೆ ಲಕ್ಷ ಸಕ್ರಿಯ ಪ್ರಕರಣಗಳಿದ್ದು, ಇಡೀ ದೇಶದಲ್ಲೇ ಅತಿ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರೋ ಜಿಲ್ಲೆಯಾಗಿದೆ. ಇವರ ಪೈಕಿ ಶೇ.90-92 ರಷ್ಟು ಸೋಂಕಿತರನ್ನು ಮನೆಯಲ್ಲೇ ಇರಿಸಿ ಚಿಕಿತ್ಸೆ ನೀಡಲಾಗ್ತಿದೆ. 2ನೇ ಸ್ಥಾನದಲ್ಲಿ ಪುಣೆ ಇದ್ದು, ಇಲ್ಲಿ 1 ಲಕ್ಷದ 16 ಸಾವಿರ ಸಕ್ರಿಯ ಪ್ರಕರಣಗಳಿವೆ. ದೆಹಲಿಯಲ್ಲಿ 1 ಲಕ್ಷ ಸಕ್ರಿಯ ಪ್ರಕರಣಗಳಿದ್ರೆ, ಮುಂಬೈನಲ್ಲಿ 81 ಸಾವಿರ ಸಕ್ರಿಯ ಪ್ರಕರಣಗಳಿವೆ.

-masthmagaa.com

 

Contact Us for Advertisement

Leave a Reply