ಹವಾಮಾನ ವರದಿ: ಎಲ್ಲೆಲ್ಲಿ ಭಾರೀ ಮಳೆ ಗೊತ್ತಾ?

masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ತುಮಕೂರಿನ ಚಿಕ್ಕತೊಟ್ಲಕೆರೆಯಲ್ಲಿ ಅತಿಹೆಚ್ಚು 174 ಮಿಲಿ ಮೀಟರ್ ಮಳೆಯಾಗಿದೆ. ಬೆಂಗಳೂರಿನಲ್ಲಿ ಯಲಹಂಕದ ಜಕ್ಕೂರು ಎರಡರಲ್ಲಿ ಅತಿಹೆಚ್ಚು 91 ಮಿಲಿ ಮೀಟರ್ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಂದೆ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಕೆಲವರು ಟ್ರಾಕ್ಟರ್ ಏರಿ ಏರ್​ಪೋರ್ಟ್ಗೆ ಹೋಗಬೇಕಾದ ಪರಿಸ್ಥಿತಿ ಬಂದಿತ್ತು. ಇನ್ನು ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೊಂದುಕಡೆ ಭಾರಿ ಮಳೆಯಾಗಲಿದ್ದು, ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಬಹುತೇಕ ಕಡೆ ಸಾಧಾರಣ ಮಳೆ, ಕೆಲವೊಂದು ಕಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

-masthmagaa.com

Contact Us for Advertisement

Leave a Reply