ಅಕ್ರಮ ಗೋಮಾಂಸ ಸಾಗಾಣಿಕೆ ತಡೆದು ವಾಹನಕ್ಕೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ!

masthmagaa.com:

ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ತಡೆದು, ಒಂದು ಕಾರಿಗೆ ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಗೋಮಾಂಸ ಸಾಗಿಸುತ್ತಿದ್ದ ವಾಹನ ಚಾಲಕರ ತಲೆಯ ಮೇಲೆ ಗೋಮಾಂಸವನ್ನು ಇಟ್ಟು ಮೆರವಣಿಗೆ ಮಾಡಲಾಗಿರುವ ಪೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಅಗಿವೆ. ಇನ್ನು ಈ ಘಟನೆಯಿಂದ ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಗೂಡಿದ್ದ ಜನರನ್ನು ಚದುರಿಸಿದ್ದಾರೆ. ಜೊತೆಗೆ ಗೋ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಐದು ವಾಹನ ಹಾಗೂ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

-masthmagaa.com

Contact Us for Advertisement

Leave a Reply