ಬೆಂಗಳೂರು ಬಂದ್‌ ಕೈಬಿಟ್ಟ ಖಾಸಗಿ ಸಾರಿಗೆ ಸಂಘಟನೆಗಳು!

masthmagaa.com:

ಖಾಸಗಿ ಸಾರಿಗೆ ನಷ್ಟ ತುಂಬಿಕೊಡುವಂತೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಟನೆಗಳು ಕರೆ ನೀಡಿದ್ದ ಬೆಂಗಳೂರು ಬಂದ್‌ ವಾಪಸ್‌ ಪಡೆಯಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಖಾಸಗಿ ವಾಹನ ಸಂಘಟನೆಗಳ ಸದಸ್ಯರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಭಟನಾಕಾರರ ಬೇಡಿಕೆಗಳನ್ನ ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಖಾಸಗಿ ಸಾರಿಗೆ ಒಕ್ಕೂಟ ಬಂದ್‌ ಕೈಬಿಟ್ಟಿದೆ. ಇತ್ತ ಬಂದ್‌ ಕೈ ಬಿಡೋದಕ್ಕೂ ಮುನ್ನ ಈ ಬಗ್ಗೆ ಮಾತಾಡಿರುವ ಸಿಎಂ ಸಿದ್ದರಾಮಯ್ಯ, ಮಹಿಳೆಯರಿಗೆ ಅನುಕೂಲವಾಗಲಿ ಅಂತ ‘ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಖಾಸಗಿ ಬಸ್‌ನವರು ತಮಗೆ ನಷ್ಟವಾಗಿದ್ದು, ಅದನ್ನ ತುಂಬಿಕೊಡಿ ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಆಗಲ್ಲ. ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನೊಂದ್‌ ಕಡೆ ಬಂದ್‌ ಬಗ್ಗೆ ಮಾತಾಡಿರುವ ಡಿಸಿಎಂ ಡಿಕೆ ಶಿವಕುಮಾರ್‌, ಖಾಸಗಿ ಬಸ್‌ಗಳ ಮಾಲೀಕರಿಗೆ ಸಮಸ್ಯೆ ಆಗಿರೋದು ನಿಜ. ಆದ್ರೆ ಈ ಮುಷ್ಕರ ರಾಜಕೀಯ ಪ್ರೇರಿತ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply