ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 4 ಕಂದಮ್ಮಗಳು ಸಜೀವ ದಹನ

masthmagaa.com:

ಮಧ್ಯಪ್ರದೇಶ ರಾಜಧಾನಿ ಭೋಪಾಲ್​​ನಲ್ಲಿ ಸರ್ಕಾರಿ ಸ್ವಾಮ್ಯದ ಕಮಲಾ ನೆಹರು ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಂದಮ್ಮಗಳು ಸಜೀವ ದಹನವಾಗಿವೆ. ಆಸ್ಪತ್ರೆಯ ಮಕ್ಕಳ ವಾರ್ಡ್​​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ವಾರ್ಡ್​​ನಲ್ಲಿ ಸುಮಾರು 40 ಮಕ್ಕಳಿದ್ದವು. ಅದರಲ್ಲಿ 36 ಮಕ್ಕಳನ್ನ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಮೃತಪಟ್ಟ ಕಂದಮ್ಮಗಳ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ ಮಧ್ಯಪ್ರದೇಶ ಸರ್ಕಾರ. ಜೊತೆಗೆ ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

-masthmagaa.com

Contact Us for Advertisement

Leave a Reply