masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 31,443 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 2,020 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 08 ಲಕ್ಷದ 74 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,08,764 ಆಗಿದೆ.

ಕಳೆದ 24 ಗಂಟೆಗಳಲ್ಲಿ 49,007 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿಗು ಅಧಿಕ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 31 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.28 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.32 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 17.40 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 43.40 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 40.65 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 38.14 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply