masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 43,654 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 640 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 14 ಲಕ್ಷದ 84 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,22,022 ಆಗಿದೆ.

ಕಳೆದ 24 ಗಂಟೆಗಳಲ್ಲಿ 41,678 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 06 ಲಕ್ಷದ 63 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 3 ಲಕ್ಷದ 99 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.39 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.34 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 17.36 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 46.09 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನ 40.02 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 44.61 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply