ಕಾಂಗ್ರೆಸ್‌ಗೆ ದೊಡ್ಡ ಬಲ! ಕೈ ಪಾಳಯಕ್ಕೆ ಸೇರ್ಪಡೆಯಾಗಲಿದ್ದಾರೆ ಗೀತಾ ಶಿವರಾಜ್‌ ಕುಮಾರ್‌!

masthmagaa.com:

ಈ ನಡುವೆ ಕಾಂಗ್ರೆಸ್‌ ಪಕ್ಷಕ್ಕೆ ಗೀತಾ ಶಿವರಾಜ್‌ ಕುಮಾರ್‌ ಸೇರ್ಪಡೆಯಾಗಲಿದ್ದಾರೆ. ನಾಳೆಯೇ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಗೀತಾ ಶಿವರಾಜ್‌ ಕುಮಾರ್ ಕಾಂಗ್ರೆಸ್‌ ಸದಸ್ಯತ್ವ ಪಡೆಯಲಿದ್ದಾರೆ ಅಂತ ಮಾಹಿತಿ ಲಭ್ಯವಾಗಿದೆ. ಸೊರಬ ಕ್ಷೇತ್ರದಲ್ಲಿ ತಮ್ಮ ಸಹೋದರ ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರ ಪ್ರಚಾರ ನಡೆಸೋ ಸಾಧ್ಯತೆ ಇದೆ. ಈ ಕಡೆ ಕಾಂಗ್ರೆಸ್‌ನಿಂದ ಬಂಡಾಯ ಎದ್ದು ನಾಮಪತ್ರ ಸಲ್ಲಿಸಿರೋರು ಸ್ಪರ್ಧೆಯಿಂದ ಹಿಂದೆ ಸರಿಯದಿದ್ರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತೆ ಅಂತ ಡಿಕೆಶಿವಕುಮಾರ್‌ ಎಚ್ಚರಿಕೆ ಕೊಟ್ಟಿದ್ದಾರೆ.

-masthmagaa.com

Contact Us for Advertisement

Leave a Reply