ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ! ಸುದ್ಧಿಗೋಷ್ಠಿಯಲ್ಲಿ ಕುಮಾರಸ್ವಾಮಿ ಹೇಳಿದ್ದೇನು?

masthmagaa.com:

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿವೆ ಅನ್ನೋ ಚರ್ಚೆಗಳು ಓಡಾಡ್ತಿವೆ. ಈ ಬೆನ್ನಲ್ಲೇ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹಾಗೂ ಬಸವರಾಜ್‌ ಬೊಮ್ಮಾಯಿ ಅವ್ರು ಜಂಟಿ ಸುದ್ಧಿಗೋಷ್ಠಿ ನಡೆಸಿದ್ದು, ಮೈತ್ರಿ ಕುರಿತು ಸುಳಿವು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಜೆಡಿಎಸ್​ ಹಾಗೂ ಬಿಜೆಪಿ ಒಟ್ಟಾಗಿ ಸದನದ ಒಳಗೂ ಮತ್ತು ಹೊರಗೆ ಹೋರಾಟ ನಡೆಸಲಿವೆ ಅಂತ ಕುಮಾರಸ್ವಾಮಿ ಅನೌನ್ಸ್‌ ಮಾಡಿದ್ದಾರೆ. ಜೊತೆಗೆ ನಾನು ವಿರೋಧ ಪಕ್ಷದಲ್ಲಿದ್ದೇನೆ, ಬೊಮ್ಮಾಯಿ ಅವರೂ ಇದ್ದಾರೆ. ಹೀಗಾಗಿ ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ. ಈ ಹಿನ್ನಲೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ಸಂಘಟನೆ ಮಾಡಲು 10 ಜನರ ತಂಡವೊಂದನ್ನ ರಚನೆ ಮಾಡಲಾಗಿದೆ ಅಂತ ಕುಮಾರಸ್ವಾಮಿ ತಿಳಿಸಿದ್ದಾರೆ. ಇದೇ ವೇಳೆ ಕುಮಾರಸ್ವಾಮಿಯವರು ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸೋದಾಗಿ ಹೇಳಿದ್ದಾರೆ. ಇತ್ತ ಬಿಜೆಪಿ ಹಾಗೂ ಜೆಡಿಎಸ್‌ ಒಟ್ಟಾಗಿ ಹೋರಾಟ ಮಾಡ್ತೀವಿ ಅನ್ನೊ ಹೇಳಿಕೆಗೆ ಕಾಂಗ್ರೆಸ್‌ ಟೀಕೆ ಮಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ರಾಜ್ಯದಲ್ಲಿ ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗ್ತಿದೆ. ಜೆಡಿಎಸ್ ಕೋಮುವಾದವನ್ನ ಅಳವಡಿಸಿಕೊಳ್ಳುತ್ತಾ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತಾ? ಅನ್ನೊ ಪ್ರಶ್ನೆ ನಮ್ಮ ಮುಂದಿವೆ. ಈ ಬೆಳವಣಿಗೆಗಳನ್ನ ನೋಡ್ತಿದ್ರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರೋದು ಕಾಣ್ತಿದೆ, ಥೇಟ್ ನಾಗವಲ್ಲಿಯ ಥರ ಅಂತ ಕಾಂಗ್ರೆಸ್‌ ವ್ಯಂಗ್ಯ ಮಾಡಿದೆ.

-masthmagaa.com

Contact Us for Advertisement

Leave a Reply