ಡಿಸಿಎಂ ಡಿಕೆಶಿ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ದ ಬಿಜೆಪಿ ದೂರು!

masthmagaa.com:

ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ದ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ʻಎಲೆಕ್ಷನ್‌ ಪ್ರಚಾರದ ವೇಳೆ ಕಲಬುರಗಿಯಲ್ಲಿ 39 ಕೋಟಿ ರೂ ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡೋದಾಗಿ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇನ್ನೊಂದೆಡೆ ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಡಿ.ಕೆ.ಶಿ ಒತ್ತಾಯ ಮಾಡ್ತಿದ್ದಾರೆ. ಹೀಗಾಗಿ ಡಿಕೆಶಿ ಅವ್ರನ್ನ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಕೈ ಬಿಡಬೇಕುʼ ಅಂತೇಳಿ ಬಿಜೆಪಿ ಚುನಾವಣಾ ಆಯೋಗಕ್ಕೆ ಒತ್ತಾಯಿಸಿ ದೂರು ನೀಡಿದೆ.

-masthmagaa.com

Contact Us for Advertisement

Leave a Reply