ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​​ಗೆ ಕೊರೋನಾ!

masthmagaa.com:

ಈ ನಡುವೆ ಸಿಎಂ ಅರವಿಂದ್ ಕೇಜ್ರಿವಾಲ್​​ಗೂ ಕೊರೋನಾ ಬಂದಿದ್ದು, ಐಸೋಲೇಷನ್​​ಗೆ ಒಳಗಾಗಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ್​​​ನ ಹಲವು ಚುನಾವಣಾ ರ್ಯಾಲಿಗಳಲ್ಲಿ ಇವರು ಭಾಗಿಯಾಗಿದ್ರು. ಈಗ ಕೊರೋನಾ ಬಂದಿದ್ದು, ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಕೊರೋನಾ ಪರೀಕ್ಷೆ ಮಾಡಿಸ್ಕೊಳ್ಳಿ ಅಂತ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಸದ ಮನೋಜ್ ತಿವಾರಿಗೂ ಕೊರೋನಾ ಬಂದಿದೆ. ಹುಷಾರಿರಲಿಲ್ಲ. ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಐಸೋಲೇಷನ್​​ಗೆ ಒಳಗಾಗಿದ್ದೀನಿ ಅಂತ ಟ್ವೀಟ್ ಮಾಡಿದ್ದಾರೆ. ಈ ಹಿಂದೆಯೂ ಒಂದ್ಸಲ ಇವರಿಗೆ ಕೊರೋನಾ ಬಂದಿತ್ತು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯ ಕುಟುಂಬದ ಸದಸ್ಯರೊಬ್ಬರು ಮತ್ತು ಸಿಬ್ಬಂದಿ ಪೈಕಿ ಒಬ್ಬರಿಗೆ ಕೊರೋನಾ ಬಂದಿದೆ. ಪ್ರಿಯಾಂಕಾ ಗಾಂಧಿ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಐಲೋಲೇಷನ್​ಗೆ ಒಳಗಾಗಿದ್ದಾರೆ.

-masthmagaa.com

Contact Us for Advertisement

Leave a Reply