ಬೆಂಗಳೂರಿನಲ್ಲಿ ʻದಿ ಕೇರಳ ಸ್ಟೋರಿʼ ಸಿನಿಮಾ ಟಿಕೇಟ್‌ ಬುಕ್‌ ಮಾಡಿದ ಬಿಜೆಪಿ ನಾಯಕರು!

masthmagaa.com:

‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ ಬಿಜೆಪಿಯ ಬೆಂಬಲದಿಂದ ದೊಡ್ಡ ಹಿಟ್ ಆಗಿತ್ತು. ಇದೀಗ ದಿ ಕೇರಳ ಸ್ಟೋರಿ ಸಿನಿಮಾಕ್ಕು ಸಹ ಇದೇ ರೀತಿ ಬಿಜೆಪಿಯ ಬೆಂಬಲ ಸಿಗುತ್ತಿದೆ. ಇಂದು (ಮೇ 07) ರಾತ್ರಿ‌ 8:30ಕ್ಕೆ ಬೆಂಗಳೂರಿನ ಗರುಡಾ ಮಾಲ್​ನಲ್ಲಿ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಬಿಜೆಪಿ ನಾಯಕರು ವೀಕ್ಷಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಬಿಜೆಪಿ ಸಹ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಮತ್ತು ಸಂಸದ ತೇಜಸ್ವಿ ಸೂರ್ಯ ಇನ್ನೂ ಕೆಲವು ನಾಯಕರು ಸಿನಿಮಾ ನೋಡಲಿದ್ದಾರೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಸಿನಿಮಾವನ್ನು ಹೊಗಳುವ ಮೂಲಕ ಪರೋಕ್ಷ ಪ್ರಚಾರ ನೀಡಿದ್ದಾರೆ. ಅದರ ಬೆನ್ನಲ್ಲೆ ಮಧ್ಯ ಪ್ರದೇಶದ ಬಿಜೆಪಿ ಸರ್ಕಾರವು ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಿತ್ತು. ಇದೀಗ ಬಿಜೆಪಿ ರಾಷ್ಟ್ರ ಮತ್ತು ಕರ್ನಾಟಕ ರಾಜ್ಯ ಬಿಜೆಪಿ ನಾಯಕರು ಸಿನಿಮಾ ವೀಕ್ಷಿಸುವ ಮೂಲಕ ಸಿನಿಮಾಕ್ಕೆ ಬೆಂಬಲ ವ್ಯಕ್ತಪಡಿಸಲು ಮುಂದಾಗಿದ್ದಾರೆ.

-masthmagaa.com

Contact Us for Advertisement

Leave a Reply