ಕರ್ನಾಟಕದಲ್ಲೂ ಜೆಸಿಬಿ ತರುವ ಸ್ಥಾನಕ್ಕೆ ಬಂದೇ ಬರ್ತೀನಿ: ಯತ್ನಾಳ್‌

masthmagaa.com:

ನಾನು ಮುಂದೆ ಒಂದು ದಿನ ರಾಜ್ಯದ ಮುಖ್ಯಮಂತ್ರಿ ಆಗ್ತೀನಿ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಪರೋಕ್ಷವಾಗಿ ಹೇಳಿದ್ದಾರೆ. ಕಾರ್ಯಕ್ರಮವೊಂದ್ರಲ್ಲಿ ಮಾತಾಡಿರುವ ಯತ್ನಾಳ್‌, ಒಂದಿಲ್ಲ ಒಂದು ದಿವಸ ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ. ಒಂದಲ್ಲಾ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ ಅಂತ ಯತ್ನಾಳ್‌ ಹೇಳಿದ್ದಾರೆ. ಕರ್ನಾಟಕದಲ್ಲಿ ಜೆಸಿಬಿ ಬಂದೇ ಬರುತ್ತದೆ. ಎರಡೇ ತಿಂಗಳು ನನ್ನನ್ನು ಗೃಹ ಸಚಿವ ಮಾಡಿ ನೋಡಿ. ಉತ್ತರ ಪ್ರದೇಶದ ಬಗ್ಗೆ ಗೊತ್ತಲ್ಲ ಆ ರೀತಿ ಕರ್ನಾಟಕ ಮಾಡುತ್ತೇನೆ. ಪೊಲೀಸರ ಕೈಯಲ್ಲಿ ಗನ್ ಕೊಡುತ್ತಾರೆ. ಆದರೆ ಅದನ್ನು ಬಳಸುವಂತಿಲ್ಲವಂತೆ. ಹಾಗಾದರೆ ಪೊಲೀಸರ ಕೈಗೆ ಗನ್ ಕೊಡುವುದು ಯಾಕೆ? ಅಂತ ಪ್ರಶ್ನಿಸಿದ್ದಾರೆ. ಇದೇ ವೇಳೆ ನಾನು ಈ ಹಿಂದೆ ಸ್ವತಂತ್ರವಾಗಿ ಪರಿಷತ್ ಸ್ಥಾನಕ್ಕೆ ಆಯ್ಕೆ ಆಗಿದ್ದೆ. ಯಾಕೆಂದರೆ ನಮ್ಮಲ್ಲೂ ಕೆಲವು ಸಲ ನಮ್ಮಂತವರಿಗೆ ಟಿಕೆಟ್ ಕೊಡಲ್ಲ. ಯಾಕಂದರೆ ವಂಶ ಬೆಳೆಸಬೇಕಲ್ಲ, ಮಕ್ಕಳಿಗೆ ಮೊಮ್ಮಕ್ಕಳಿಗೆ ಅಧಿಕಾರ ಕೊಡಬೇಕಲ್ಲ. ಹಾಗಾಗಿ ನಮ್ಮಲ್ಲೂ ಕೆಲವು ಸಲ ಟಿಕೆಟ್ ಕೊಡಲ್ಲ ಅಂತ ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಮಾಡಲಾಗುತ್ತೆ ಅಂತ ಯತ್ನಾಳ್‌ ಹೇಳಿದ್ದಾರೆ.

ಇತ್ತ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಹಸಿರುವ ಬಾವುಟ ಹಿಡಿದು ಸಾಗುತ್ತಿದ್ದ ಯುವಕರು ಯತ್ನಾಳ್ಅವರ ಬ್ಯಾನರ್ ಹರಿದು ಹಾಕಿರುವ ಘಟನೆ ವಿಜಯಪುರದ ಶಿವಾಜಿ ವೃತ್ತದಲ್ಲಿ ನಡೆದಿದೆ. ಯುವಕರ ಕಿಡಿಗೇಡಿತನದ ದೃಶ್ಯವನ್ನು ವ್ಯಕ್ತಿಯೊಬ್ಬರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದು, ವೈರಲ್ ಆಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಮೆರವಣಿಗೆಯಲ್ಲಿ ಭಾಗಿಯಾಗಿದ್ದವರನ್ನು ಚದುರಿಸಿದ್ದಾರೆ. ಅತ್ತ ಬ್ಯಾನರ್‌ ಹಿರದ ವಿಚಾರ ಗೊತ್ತಾಗ್ತಿದ್ದಂತೆ ಯತ್ನಾಳ್ ಬೆಂಬಲಿಗರು ಜಮಾಯಿಸಿದ್ದಾರೆ. ಉದ್ದೇಶ ಪೂರ್ವಕವಾಗಿ ಯತ್ನಾಳ್ ಭಾವಚಿತ್ರದ ಬ್ಯಾನರ್ ಹರಿದು ಹಾಕಿದ್ದಾಗಿ ಆರೋಪಿಸಿದ್ದು, ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಅಂತ ಒತ್ತಾಯಿಸಿದ್ದಾರೆ. ಇನ್ನು ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಅಂತ ಪೊಲೀಸರು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply