ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಮಾಡಾಳ್‌ ವಿರೂಪಾಕ್ಷಪ್ಪ!

masthmagaa.com:

ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಸಿಕ್ಕ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರೊ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ 5 ದಿನಗಳಿಂದ ನಾಪತ್ತೆಯಾಗಿರೊ ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರಿಂದ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಾಗೂ ಅರ್ಜಿ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply