ಉತ್ತರ ಪ್ರದೇಶ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಲ್ಲಾ 17 ಸ್ಥಾನ ಗೆದ್ದು ಬೀಗಿದ ಬಿಜೆಪಿ

masthmagaa.com:

ಉತ್ತರ ಪ್ರದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಉತ್ತರ ಪ್ರದೇಶದ ಎಲ್ಲಾ 17 ಮಹಾನಗರ ಪಾಲಿಕೆಗಳ ಮೇಯರ್‌ ಸ್ಥಾನ ಹಾಗೂ 90 ಪುರಸಭೆಗಳಲ್ಲಿ ಅಧ್ಯಕ್ಷ ಸ್ಥಾನ ಅಲಂಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸುಮಾರು 600 ವಾರ್ಡ್‌ಗಳಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ. ಈ ವೇಳೆ ಮಾತಾಡಿರುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌, ಅಭಿವೃದ್ದಿ ಹಾಗೂ ಜನರ ಸುರಕ್ಷತೆ ಹಿತದೃಷ್ಟಿಯಲ್ಲಿ ಕೆಲಸ ಮಾಡುವುದನ್ನ ಮುಂದುವರೆಸುತ್ತೇವೆ ಅಂತ ಹೇಳಿದ್ದಾರೆ. ಇತ್ತ ಉತ್ತರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಿದ ನಂತ್ರ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಅಂದ್ಹಾಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಬಳಿಕ ಯೋಗಿ ​50ಕ್ಕೂ ಹೆಚ್ಚು ರ್‍ಯಾಲಿಗಳನ್ನು ನಡೆಸಿದ್ದರು.

-masthmagaa.com

Contact Us for Advertisement

Leave a Reply