ಬಿಹಾರ ಯುದ್ಧದ ಹೊತ್ತಲ್ಲೇ ಪಶ್ಚಿಮ ಬಂಗಾಳದ ಮೇಲೆ ಕಣ್ಣು..!

masthmagaa.com:

ದೆಹಲಿ: ಬಿಹಾರದಲ್ಲಿ ಚುನಾವಣೆ ನಡೆಯುತ್ತಿರುವಾಗಲೇ ಬಿಜೆಪಿ ಚುನಾವಣಾ ಚಾಣಕ್ಯನ ಕಣ್ಣು ಪಶ್ಚಿಮ ಬಂಗಾಳದ ಮೇಲೆ ಬಿದ್ದಿದೆ. ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರದಿಂದ ದೂರ ಉಳಿದುಕೊಂಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ಚುನಾವಣೆಗೆ ಸಿದ್ಧತೆ ಆರಂಭಿಸಿದಂತಿದೆ. ಹೀಗಾಗಿಯೇ ಮುಂದಿನ ಗುರುವಾರ ಮತ್ತು ಶುಕ್ರವಾರ ಪಶ್ಚಿಮ ಬಂಗಾಳ ಪ್ರವಾಸಕ್ಕೆ ಪ್ಲಾನ್ ಮಾಡಿದ್ದಾರೆ. ಈ ವೇಳೆ ಪಕ್ಷ ಸಂಘಟನೆಗೆ ಹೆಚ್ಚಿನ ಮಹತ್ವ ನೀಡಲಿದ್ದಾರೆ ಅಂತ ಪಕ್ಷದ ಮೂಲಗಳು ಮಾಹಿತಿ ನೀಡಿವೆ.

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗಷ್ಟೇ ಬಿಜೆಪಿ ನಾಯಕರಾದ ರಾಹುಲ್ ಸಿನ್ಹಾ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿಸಿ, ಟಿಎಂಸಿ ನಾಯಕರಾಗಿದ್ದ ಮುಕುಲ್ ರಾಯ್ ಮತ್ತು ಅನುಪಮ್ ಹಜ್ರಾ ಅವರಿಗೆ ಹುದ್ದೆಗಳನ್ನು ನೀಡಲಾಗಿದೆ. ಇದು ಸ್ಥಳೀಯ ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರ ಮನವೊಲಿಸಿ, ಪ್ರಚಾರಕ್ಕೆ ಸಜ್ಜುಗೊಳಿಸಲು ಅಮಿತ್ ಶಾ ಈ ಪ್ರವಾಸ ಕೈಗೊಳ್ತಿದ್ದಾರೆ ಅಂತ ಕೂಡ ಹೇಳಲಾಗ್ತಿದೆ.

-masthmagaa.com

Contact Us for Advertisement

Leave a Reply