ಭಾರತದ ಬಗ್ಗೆ ಅಮೆರಿಕ ಮೆಚ್ಚುಗೆ ಮಾತು!

masthmagaa.com:

ಇಂಡೋ-ಪೆಸಿಫಿಕ್ ವಲಯದಲ್ಲಿ ಭಾರತ ತುಂಬಾ ಮುಖ್ಯವಾದ ಪಾಲುದಾರ.. ಭಾರತ ಜಾಗತಿಕ ಶಕ್ತಿಯಾಗಿ ಹೊರಹೊಮ್ಮುವುದನ್ನು ನಾವು ಸ್ವಾಗತಿಸುತ್ತೇವೆ ಅಂತ ಅಮೆರಿಕ ಹೇಳಿದೆ. ರಾಜತಾಂತ್ರಿಕ, ಭದ್ರತೆ, ಪ್ರಾದೇಶಿಕ ಸಹಕಾರ, ಭಯೋತ್ಪಾದನೆ ನಿಗ್ರಹ, ಶಾಂತಿ ಕಾಪಾಡುವಿಕೆ, ಪರಿಸರ, ಆರೋಗ್ಯ, ತಂತ್ರಜ್ಞಾನ, ಕೃಷಿ, ಬಾಹ್ಯಾಕಾಶ ಮತ್ತು ಸಮುದ್ರ ಕ್ಷೇತ್ರದಲ್ಲಿ ಸಹಕಾರ ನೀಡುತ್ತೇವೆ ಅಂತ ಅಮೆರಿಕದ ಸ್ಟೇಟ್ ಡಿಪಾರ್ಟ್​ಮೆಂಟ್ ಹೇಳಿದೆ.

ಜೊತೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಸದಸ್ಯತ್ವ ಹೊಂದಿರೋ ವಿಚಾರವನ್ನು ಸ್ವಾಗತಿಸಿದ್ದು, ಅಮೆರಿಕ ಭಾರತದ ದೊಡ್ಡ ವ್ಯಾಪಾರಿ ಪಾಲುದಾರ ರಾಷ್ಟ್ರವಾಗಿರುತ್ತೆ ಅಂತ ಹೇಳಿದೆ. ಜೊತೆಗೆ ಭಾರತೀಯ ವಿದೇಶಾಂಗ ಸಚಿವ ಎಸ್​ ಜೈಶಂಕರ್ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್ ಮಯನ್ಮಾರ್ ಬಿಕ್ಕಟ್ಟು ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಅಂತ ಕೂಡ ಮಾಹಿತಿ ನೀಡಿದೆ.

-masthmagaa.com

Contact Us for Advertisement

Leave a Reply