“ಪೊಲೀಸ್ ಸ್ಟೋರಿ” ಗೆ 25 ನೇ ವಸಂತ!

masthmagaa.com:

ಡೈಲಾಗ್ ಕಿಂಗ್ ಸಾಯಿಕುಮಾರ್ ಅಭಿನಯಿಸಿ, ಭರ್ಜರಿ ಯಶಸ್ಸು ಕಂಡಿದ್ದ “ಪೊಲೀಸ್ ಸ್ಟೋರಿ” ಚಿತ್ರ ತೆರೆಕಂಡು ಆಗಸ್ಟ್ 16 ಕ್ಕೆ 25 ವರ್ಷ ಪೂರೈಸಿದೆ. 1996 ರಲ್ಲಿ ಈ ಚಿತ್ರ ತೆರೆ ಕಂಡಿತ್ತು.
ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ನಲ್ಲಿ ಈ ಚಿತ್ರ ಭರ್ಜರಿ ಜಯಭೇರಿ ಬಾರಿಸಿತ್ತು.

ಇಪ್ಪತ್ತೈದು ವರ್ಷ ತುಂಬಿರುವ ಈ ಸಂದರ್ಭದಲ್ಲಿ ನಟ ಸಾಯಿಕುಮಾರ್, ಚಿತ್ರ ಯಶಸ್ಸಿಗೆ ಕಾರಣರಾದ ನಿರ್ಮಾಪಕ, ನಿರ್ದೇಶಕ ಸೇರಿದಂತೆ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.
ಚಿತ್ರ‌ ಯಶಸ್ಸು ಕಾಣಲು ಮಾಧ್ಯಮದವರ ಹಾಗೂ ಕನ್ನಡ ಕಲಾಭಿಮಾನಿಗಳ ಪಾಲು ಬಹು ದೊಡ್ಡದು. ಅವರಿಗೆ ವಿಶೇಷ ಧನ್ಯವಾದ ಎನ್ನುತ್ತಾರೆ ಸಾಯಿಕುಮಾರ್. ಈ ಶುಭ ಸಂದರ್ಭದಲ್ಲಿ ಮತ್ತೇ ಇದೇ ತಂಡದೊಂದಿಗೆ ಸದ್ಯದಲ್ಲೇ ನೂತನ ಚಿತ್ರ ಆರಂಭಿಸುವ ಯೋಚನೆಯಿದೆ ಎಂದು ಸಾಯಿಕುಮಾರ್ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply