ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜು ಶ್ರೀವಾಸ್ತವ ಇನ್ನಿಲ್ಲ!

masthmagaa.com

ಬಾಲಿವುಡ್ ಕಂಡ ಯಶಸ್ವಿ ಹಾಸ್ಯ ನಟ ರಾಜು ಶ್ರೀವಾಸ್ತವ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತೀರಿಕೊಂಡಿದ್ದಾರೆ. ದೀರ್ಘಕಾಲೀನ ಅನಾರೋಗ್ಯದ ಕಾರಣದಿಂದಾಗಿ ದೆಹಲಿಯ ಆಸ್ಪತ್ರೆಗೆ ಅವರನ್ನ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದಲೂ ಅವರು ಕೋಮಾದಲ್ಲಿ ಇದ್ದರು. ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ. ಆಗಸ್ಟ್ 10ರಂದು ಅವರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗ ರಾಜು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಈವರೆಗೂ ಅವರಿಗೆ ಪ್ರಜ್ಞೆ ಮರಳಿ ಬರಲೇ ಇಲ್ಲ. ವೈದ್ಯರು ಎಷ್ಟೇ ಪ್ರಯತ್ನಗಳನ್ನು ಮಾಡಿದರೂ, ರಾಜು ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ.

ಅಮಿತಾಭ್ ಬಚ್ಚನ್ ಅವರ ಮಿಮಿಕ್ರಿ ಮಾಡಿಕೊಂಡು ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದ ರಾಜು ಶ್ರೀವಾಸ್ತವ ಹಲವಾರು ವರ್ಷಗಳಿಂದ ಬಾಲಿವುಡ್ ನಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿದ್ದಾರೆ. ಮೊದಲಿಗೆ ಸಣ್ಣ ಪುಟ್ಟ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡ ರಾಜು ಅವರು ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೇಂಜ್’ ಕಾರ್ಯಕ್ರಮದ ಮೂಲಕ ಅಪಾರ ಅಭಿಮಾನಿಗಳನ್ನ ಸಂಪಾದಿಸಿದರು.

ಅದಾದ ನಂತರ ಅವರಿಗೆ ಬೆಳ್ಳಿತೆರೆಯಲ್ಲಿ ದೊಡ್ಡ ಸಿನಿಮಾಗಳಲ್ಲಿ ದೊಡ್ಡ ಪಾತ್ರಗಳು ಸಿಗಲಿಕ್ಕೆ ಶುರು ಆಯಿತು.  ಬಾಜಿಗರ್, ಬಾಂಬೆ ಟು ಗೋವಾ, ಮೈನೆ ಪ್ಯಾರ್ ಕಿಯಾ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಅವರು ಕಾಣಿಸಿಕೊಂಡಿದ್ದಾರೆ. ರಾಜು ಶ್ರೀವಾಸ್ತವ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿದಿದೆ. ರಾಜು ಅವರಿಗೆ 58 ವರ್ಷ ವಯಸ್ಸಾಗಿತ್ತು.

ರಾಜು ಶ್ರೀವಾಸ್ತವ ಅವರ ಸಂಪೂರ್ಣ ಜೀವನ ಚರಿತ್ರೆ ತಿಳಿದುಕೊಳ್ಳಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

-masthmagaa.com

Contact Us for Advertisement

Leave a Reply