masthmagaa.com:

ಸ್ಯಾಂಡಲ್​ವುಡ್​ ನಶಾ ಪ್ರಕರಣದಲ್ಲಿ ಜೈಲು ಸೇರಿ ಎರಡು ದಿನದ ಹಿಂದಷ್ಟೇ ರಿಲೀಸ್ ಆಗಿರುವ ನಟಿ ಸಂಜನಾ ಗಲ್ರಾನಿಗೆ ಮತ್ತೊಂದು ತಲೆನೋವು ಎದುರಾದಂತೆ ಕಾಣ್ತಿದೆ. ಸಂಜನಾ ಗಲ್ರಾನಿಯನ್ನ ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿತ್ತು ಅಂತ ವಕೀಲರೊಬ್ಬರು ಬೆಂಗಳೂರಿನ ಕಾಟನ್​ಪೇಟೆ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮೌಲ್ವಿಯೊಬ್ಬರ ವಿರುದ್ಧ ಆರೋಪ ಮಾಡಲಾಗಿದೆ. ಈ ಸಂಬಂಧ ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ದೇಶದಲ್ಲಿ ಲವ್ ಜಿಹಾದ್ ವಿರುದ್ಧದ ಕಾನೂನು ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಈ ದೂರು ದಾಖಲಾಗಿದೆ. ರಾಜ್ಯ ಸರ್ಕಾರ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತಂದೇ ತರ್ತೀವಿ ಅಂತ ಹೇಳ್ತಿದೆ. ಈ ನಿಟ್ಟಿನಲ್ಲಿ ಸಂಜನಾ ಗಲ್ರಾನಿ ಮತಾಂತರ ಆಗಿರುವ ವಿಚಾರ ಕೂಡ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

-masthmagaa.com

Contact Us for Advertisement

Leave a Reply