ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ! ಮತ್ತೆ ಇಂಟರ್‌ನೆಟ್ ಸೇವೆ ಸ್ಥಗಿತ!
masthmagaa.com: ಈಶಾನ್ಯ ರಾಜ್ಯ ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಣಿಪುರ ಸಿಎಂ ಎನ್. ಬಿರೇನ್ ಸಿಂಗ್ ಅವ್ರು ನಿವಾಸದ ಬಳಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಗುಂಪನ್ನ ಚದುರಿಸಲು ಪೊಲೀಸರು ಅಶ್ರುವಾಯು ಹಾಗೂ ಹೊಗೆ ಸ್ಫೋಟಕಗಳನ್ನ ಬಳಸಿದ್ದಾರೆ. ಇನ್ನು ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನತೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್, CRPF, RPF ಹೆಚ್ಚಿನ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಕಾನೂನು ಸುವವ್ಯಸ್ಥೆ ದೃಷ್ಟಿಯಿಂದ ಸೆಪ್ಟೆಂಬರ್ 27ರಿಂದ 29ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಷ್ಟೆ ಅಲ್ದೆ ತಪ್ಪು ಮಾಹಿತಿ ಮತ್ತು ರೂಮರ್ಸ್‌ಗಳು ಹರಡದಣತೆ ತಡೆಯಲು ಮತ್ತೆ ಅಕ್ಟೋಬರ್ 1ರವರೆಗೆ ಇಂಟರ್‌ನೆಟ್ ಸೇವೆಗಳನ್ನ ಬ್ಯಾನ್ ಮಾಡಲಾಗಿದೆ. ಇನ್ನು ಈ ಕೇಸ್‌ನ್ನ ಸಿಬಿಐಗೆ ಹಸ್ತಾಂತರಿಸಲಾಗಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರ ಜೊತೆ ಸಂಪರ್ಕದಲ್ಲಿದ್ದೇವೆ ಅಂತ ಬಿರೇನ್ ಸಿಂಗ್ ಹೇಳಿದ್ದಾರೆ. Share on: WhatsAppContact Us for AdvertisementRead More →