ಕಾವೇರಿ ವಿವಾದ: ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಮುಂದಾದ ರಾಜ್ಯ ಸರ್ಕಾರ

masthmagaa.com:

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದ್ರಿಂದ ರಾಜ್ಯ ಸರ್ಕಾರ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿಲುಕಿದ್ದು ಇಂದು ಸಂಜೆ ದಿಲ್ಲಿಗೆ ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ. ದಿಲ್ಲಿ ತಾಜ್‌ ಮಾನ್‌ ಸಿಂಗ್‌ ಹೊಟೇಲ್‌ನಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಯಲಿದೆ. ಸಭೆಯಲ್ಲಿ ಸಿದ್ದರಾಮಯ್ಯ ಜೊತೆಗೆ, ಡಿಸಿಎಂ ಡಿಕೆ ಶಿವಕುಮಾರ್‌, ರಾಜ್ಯವನ್ನ ಪ್ರತಿನಿಧಿಸುವ ಕೇಂದ್ರದ ಸಚಿವರು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಭಾಗಿಯಾಗಲಿದ್ದಾರೆ. ಇತ್ತ ತಮಿಳುನಾಡಿಗೆ ನೀರು ಬಿಡುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಅತಂತ್ರ ಸ್ಥಿತಿಯಲ್ಲಿದ್ದು, ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಅಂತ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಇನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ. ಜಲಸಂಪನ್ಮೂಲ ಸಚಿವ , ಡಿಸಿಎಂ ಡಿಕೆ ಶಿವಕುಮಾರ್‌ ಸಂಪುಟದಿಂದ ವಜಾ ಆಗಬೇಕು ಅಂತ ರಾಜ್ಯ ರೈತ ಸಂಘ ಆಗ್ರಹಿಸಿದೆ.

-masthmagaa.com

Contact Us for Advertisement

Leave a Reply