ಕಾವೇರಿ ವಿವಾದ: ಕಾನೂನು ಸಮರಕ್ಕೆ ಮುಂದಾದ ರೈತರು

masthmagaa.com:

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದೆ. ಕಳೆದ 6 ದಿನಗಳಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್​ಎಸ್ ಬಳಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರು ಇದೀಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಮಾತಾಡಿರುವ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ, ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದಿಂದ ಯಾವ ರೀತಿ ಕೇಸ್ ಫೈಲ್ ಮಾಡಿದ್ದಾರೆ ಅದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಅದರ ಮೇಲೆ ನಾವು ಸಹ ಪೆಟಿಶನ್ ಹಾಕುತ್ತೇವೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply