ಸೆಪ್ಟೆಂಬರ್‌ 26 ಬೆಂಗಳೂರು ಬಂದ್‌! ಏನಿರುತ್ತೆ? ಏನಿರಲ್ಲ?

masthmagaa.com:

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ರೈತರು, ವಿವಿಧ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಿನ್ನೆ ಮಂಡ್ಯ ಮದ್ದೂರು ಬಂದ್‌ ಮಾಡಿ ರೈತರು ಕಿಡಿಕಾರಿದ್ದರು. ಇದೀಗ ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಇತ್ತ ಬೆಂಗಳೂರು ಬಂದ್​ಗೆ ನಮ್ಮ‌ ಸಂಪೂರ್ಣ ಬೆಂಬಲ ಇರುತ್ತೆ ಅಂತ ಕೆಎಸ್​ಆರ್​​ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ತಿಳಿಸಿದ್ದಾರೆ. ಜೊತೆಗೆ ಬಿಎಂಟಿಸಿ ಸಾರಿಗೆ ಸಿಬ್ಬಂದಿ ಕೂಡ ಬಂದ್​ಗೆ ಬೆಂಬಲಿಸಲಿದ್ದಾರೆ ಅಂತ ತಿಳಿಸಿದ್ದಾರೆ. ಅತ್ತ ಬಂದ್​ಗೆ ಖಾಸಗಿ ಸಾರಿಗೆ ಸಂಘಟನೆಗಳು ಬೆಂಬಲ ಸೂಚಿಸಿವೆ. ಜೊತೆಗೆ ಓಲಾ, ಉಬರ್ ಸಂಘದಿಂದಲೂ ಬೆಂಬಲ ವ್ಯಕ್ತವಾಗಿದೆ. ಇನ್ನು ಬಂದ್‌ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ನೈತಿಕ ಬೆಂಬಲ ನೀಡಿದ್ದು, ಮಕ್ಕಳ ಹಿತದೃಷ್ಠಿಯಿಂದ ಸರ್ಕಾರವೇ ಶಾಲೆಗೆ ರಜೆ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿ ಅಂತ ಹೇಳಿವೆ.

-masthmagaa.com

Contact Us for Advertisement

Leave a Reply