ಡಿಕೆಶಿಗೆ ಸಿಬಿಐ ಸಂಕಷ್ಟ..! ನ. 23ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​

masthmagaa.com:

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾದಂತಿದೆ. ನವೆಂಬರ್ 23 ಅಂದ್ರೆ ನಾಡಿದ್ದು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ದಳ ಸಮನ್ಸ್ ನೀಡಿದೆ. ಅಕ್ಟೋಬರ್‌ 5 ರಂದು ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಇದೇ ವೇಳೆ ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಇದೇ ವಿಚಾರವಾಗಿ ಈಗ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಸಿಬಿಐ ಸಮನ್ಸ್​ಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್ ನವೆಂಬರ್​​ 25ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply