ರಾಜ್ಯಕ್ಕೆ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಷಡ್ಯಂತ್ರ ಮಾಡ್ತಿದೆ: ಸಿಎಂ ಸಿದ್ದರಾಮಯ್ಯ

masthmagaa.com:

ಉಚಿತ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಅಂತ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಡೆಪ್ಯುಟಿ ಮ್ಯಾನೇಜರ್​ 7 ಲಕ್ಷ ಟನ್​ ಅಕ್ಕಿ ಸಂಗ್ರಹ ಇದೆ ಎಂದಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಯಾಕೆ ಪೂರೈಕೆ ಮಾಡುತ್ತಿಲ್ಲ? ಅಂತ ಪ್ರಶ್ನಿಸಿದ್ದು, ಬಿಜೆಪಿಯವರು ಬಡವರ ವಿರೋಧಿಗಳು. ಅಲ್ದೆ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರೋಕೆ ಈ ರೀತಿ ಮಾಡ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಇದೇ ವೇಳೆ ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದೆವು. ಸದ್ಯ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಕೊಡುತ್ತಿದೆ. ಅದರ ಜೊತೆಗೆ ಇನ್ನೂ 5 ಕೆ.ಜಿ ಸೇರಿಸಿ 10 ಕೆ.ಜಿ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದೆವು. ಈ ವಿಚಾರವಾಗಿ Food Corporation of Indiaದ ಡೆಪ್ಯುಟಿ ಮ್ಯಾನೇಜರ್​ ಜೊತೆ ಚರ್ಚೆ ನಡೆಸಿದ್ದೆವು. ಈ ವೇಳೆ ಕೇಂದ್ರದ ಒಪ್ಪಿಗೆ ಮೇಲೆ ಜುಲೈ 1ರಿಂದ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದೆವು. ಆದ್ರೆ ಇದೀಗ ಓಪನ್ ಮಾರ್ಕೆಟ್ ಸೇಲ್ಸ್ ಸ್ಕೀಂ (OMMSS) ಜಾರಿ ಮಾಡಿ ರಾಜ್ಯ ಸರ್ಕಾರಗಳಿಗೆ ಸೇಲಂ ಗೋಧಿ ಹಾಗೂ ಅಕ್ಕಿ ಕೊಡಲು ಆಗಲ್ಲ ಅಂತ ತಿಳಿಸಿದ್ದಾರೆ. ಇನ್ನು ತಿಂಗಳಿಗೆ 2.28 ಲಕ್ಷ ಮೆಟ್ರಿಕ್‌ ಅಕ್ಕಿ ಬೇಕು, ಆದ್ರೆ ಕೇಂದ್ರ ಕೊಡಲ್ಲ ಅಂತ ಹೇಳ್ತಿದೆ. ಅಕ್ಕಿ ಪೂರೈಕೆ ಮಾಡದಂತೆ ಕೇಂದ್ರ ಸರ್ಕಾರ ಷಡ್ಯಂತ್ರ ಮಾಡುತ್ತಿದ್ದು, ಅವ್ರು ಎಷ್ಟೇ ಷಡ್ಯಂತ್ರ ಮಾಡಿದರೂ ಅಕ್ಕಿ ವಿತರಿಸೋಕೆ ಪ್ರಯತ್ನ ಮಾಡುತ್ತೇವೆ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply