ʻಒಂದು ರಾಷ್ಟ್ರ ಒಂದು ಚುನಾವಣೆʼ ಅಧ್ಯಯನಕ್ಕೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ!

masthmagaa.com:

ಮಹತ್ವದ ಬೆಳವಣಿಗೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಅನುಕೂಲ ಹಾಗೂ ಅನಾನುಕೂಲಗಳ ಕುರಿತು ಅಧ್ಯಯನ ಮಾಡಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ. ಈ ಸಮಿತಿಯ ನೇತೃತ್ವವನ್ನ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವ್ರಿಗೆ ವಹಿಸಲಾಗಿದೆ. ಅಂದ್ಹಾಗೆ ಸೆಪ್ಟೆಂಬರ್‌ 18ರಿಂದ 22ರ ತನಕ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ ಅಂತ ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈ ಮೂಲಕ ಹೊಸ ಅಧಿವೇಶನದಲ್ಲಿ ಒಂದು ದೇಶ, ಒಂದು ಚುನಾವಣೆಗೆ ಸಂಬಂಧಿಸಿದ ಮಸೂದೆ ಮಂಡಿಸುವ ಸಾಧ್ಯತೆ ದಟ್ಟವಾಗಿದೆ ಅಂತ ಹೇಳಲಾಗ್ತಿದೆ. ಅದ್ರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.

-masthmagaa.com

Contact Us for Advertisement

Leave a Reply