ಈರುಳ್ಳಿ ಬೆಲೆ ಏರಿಕೆ ತಗ್ಗಿಸಲು ಕೇಂದ್ರ ಸರ್ಕಾರ ಮಾಡಿದ್ದೇನು ಗೊತ್ತಾ?

masthmagaa.com:

ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿ ಜನಸಾಮಾನ್ಯರು ಜೇಬಿಗೆ ಕತ್ತರಿ ಬಿದ್ದಿತ್ತು. ಈ ಹಿನ್ನಲೆಯಲ್ಲಿ ಈರುಳ್ಳಿ ಬೆಲೆ ಏರಿಕೆಯನ್ನ ತಡೆಯೋಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಬೆಲೆ ಏರಿಕೆಯನ್ನ ತಡೆಯಲು ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಯನ್ನು ಸುಧಾರಿಸಲು ಈರುಳ್ಳಿ ರಫ್ತಿನ ಮೇಲಿನ ಟ್ಯಾಕ್ಸ್‌ನ್ನ ಹೆಚ್ಚಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈರುಳ್ಳಿ ರಫ್ತಿನ ಮೇಲೆ ಶೇ.40 ರಫ್ತು ಸುಂಕ ವಿಧಿಸಲಾಗಿದೆ. ಈ ಶುಲ್ಕ 31 ಡಿಸೆಂಬರ್ 2023 ರವರೆಗೆ ಮುಂದುವರಿಯುತ್ತದೆ. ಇನ್ನು ಈರುಳ್ಳಿ ಬೆಲೆ ನಿರಂತರವಾಗಿ ಹೆಚ್ಚುತ್ತಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದೆ.

-masthmagaa.com

Contact Us for Advertisement

Leave a Reply