ಚೈತ್ರ ಕುಂದಾಪುರ ಪ್ರಕರಣದಲ್ಲಿ ಸಾಲುಮರದ ತಿಮ್ಮಕ್ಕನವರ ಹೆಸರು! ಪ್ರತಿಭಟಿಸಿದ ತಿಮ್ಮಕ್ಕ!

masthmagaa.com:

ಚೈತ್ರ ಕುಂದಾಪುರ ಟಿಕೆಟ್‌ ವಂಚನೆ ಕೇಸ್‌ನ ಪ್ರಮುಖ ಆರೋಪಿ ಅಭಿನವ ಹಾಲಸ್ವಾಮಿಯನ್ನ ಬಂಧಿಸಿರುವ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ನಿನ್ನೆ ಮಠಕ್ಕೆ ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ 50 ಲಕ್ಷ ರೂಪಾಯಿ ಸಿಕ್ಕಿದೆ ಎನ್ನಲಾಗಿದೆ. ಈವರೆಗೆ ಪೊಲೀಸರು 2.81 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಇತ್ತ ಚೈತ್ರಾ ವಂಚನೆ ಕೇಸ್‌ನಲ್ಲಿ ತಮ್ಮ ಹಾಗೂ ತಮ್ಮ ಪುತ್ರ ಉಮೇಶ್‌ ಅವರ ಹೆಸರು ಎಳೆದು ತೇಜೋವಧೆ ಮಾಡ್ತಿರೋರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ಅವರು ಪ್ರತಿಭಟನೆ ಮಾಡಿದ್ದಾರೆ. ಚೈತ್ರಾ ಕುಂದಾಪುರ ಮತ್ತು ಗಗನ್‌ ಕಡೂರು ವಂಚನೆ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆ ಮುಂದುವರಿದಿದೆ. ಆದ್ರೆ ಈ ಪ್ರಕರಣಕ್ಕೆ ನನ್ನ ಮತ್ತು ಮಗನ ಹೆಸರು ತಳುಕು ಹಾಕಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ನಾಡಿನ ನೆಲ, ಜಲ, ಪರಿಸರಕ್ಕೆ ನನ್ನ ಸಂಪೂರ್ಣ ಜೀವನ ಮೀಸಲಿಟ್ಟಿದ್ದೇನೆ. ಹೀಗಿರುವಾಗ ಸರ್ಕಾರ ನನಗೆ ನೀಡಿರುವ ಸವಲತ್ತುಗಳನ್ನು ಬೇರೆಯವರಿಗೆ ನೀಡಿ ವಂಚನೆಗೆ ಅವಕಾಶ ಮಾಡಿಕೊಟ್ಟಿದ್ದೇನೆ ಅಂತ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. ಇದರಿಂದ ನಮ್ಮ ಗೌರವಕ್ಕೆ ಧಕ್ಕೆಯಾಗಿದೆ. ಆ ವಾಹಿನಿಯವರು ಸಾಕ್ಷ್ಯ ನೀಡಲಿ ಅಂತ ಸಾಲುಮರದ ತಿಮ್ಮಕ್ಕನವರು ಒತ್ತಾಯಿಸಿದ್ದಾರೆ.

-masthmagaa.com

Contact Us for Advertisement

Leave a Reply