ಮಂತ್ರಿಗಿರಿ ಜನ ಕೊಟ್ಟ ಬಿಕ್ಷೆ..ಡಿವಿಎಸ್‍ಗೆ ಚಕ್ರವರ್ತಿ ಸೂಲಿಬೆಲೆ ಕಿವಿಮಾತು..!

ಪ್ರವಾಹ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ ಎಂದಿದ್ದ ಕೇಂದ್ರ ಸಚಿವ ಸದಾನಂದ ಗೌಡರಿಗೆ ಚಕ್ರವರ್ತಿ ಸೂಲಿಬೆಲೆ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾಷ್ಟ್ರ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೇ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ..? ಎಂದು ಪ್ರಶ್ನಿಸಿದ್ದಾರೆ.

ನಿನ್ನೆ ಈ ಬಗ್ಗೆ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಸದಾನಂದ ಗೌಡ, ರಾಜ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ, ಮಧ್ಯಂತರ ಪರಿಹಾರ ಮತ್ತು ಧೀರ್ಘ ಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಲಾಗಿದೆ. ಸದ್ಯದಲ್ಲೇ ಪರಿಹಾರ ಬಿಡುಗಡೆಯಾಗುತ್ತೆ. ನಮ್ಮದು ಜನರಿಂದ ಆಯ್ಕೆಯಾದ ಸರಕಾರ ಜನರಿಗೋಸ್ಕರ ಇರುವ ಸರಕಾರ, ಸಂಕಷ್ಟದಲ್ಲಿರುವವರ ನೋವು ನಮಗೆ ಅರಿವಿದೆ. ಇದರಲ್ಲಿ ಯಾವುದೇ ನಿರ್ಲಕ್ಷ ಇಲ್ಲ. ಈ ಬಗ್ಗೆ ನಾನು ನಿರಂತರ ಸಂಬಂಧಪಟ್ಟ ಕೇಂದ್ರ ಸರ್ಕಾರದ ಇಲಾಖೆಗಳ ಮಂತ್ರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಆದ್ರೆ ಈ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಿ ಉತ್ತರ ಕರ್ನಾಟಕ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದಿದ್ದರು.

Contact Us for Advertisement

Leave a Reply