ಚಾಲೆಂಜಿಂಗ್ ಸ್ಟಾರ್ ದರ್ಶನ್ 55 ನೇ ಸಿನಿಮಾ ಪ್ರಕಟ: ಟೈಟಲ್ ಏನ್ ಗೊತ್ತಾ!?

masthmagaa.com:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55 ನೇ ಚಿತ್ರದ ಹೆಸರು ಘೋಷಣೆಯಾಗಿದ್ದು, ಚಿತ್ರಕ್ಕೆ ಕ್ರಾಂತಿ ಎಂದು ಹೆಸರು ಇಡಲಾಗಿದೆ. ವಿ. ಹರಿಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ.

ಯಜಮಾನ ಚಿತ್ರವನ್ನು ನಿರ್ಮಾಣ ಮಾಡಿದ್ದ, ಶೈಲಜಾ ನಾಗ್ ಮತ್ತು ಬಿ ಸುರೇಶ್ ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ವಿ.ಹರಿಕೃಷ್ಣಗೆ ನಿರ್ದೇಶಕರಾಗಿ ಇದು ಎರಡನೇ ಸಿನಿಮಾ. ಸಂಗೀತ ನಿರ್ದೇಶನವನ್ನೂ ಅವರೇ ಮಾಡಲಿದ್ದಾರೆ.

ಕನ್ನಡದಲ್ಲಿ ತಯಾರಾಗಲಿರುವ ಈ ಚಿತ್ರ ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಐದೂ ಭಾಷೆಗಳಲ್ಲಿ ಸಿನಿಮಾದ ಹೆಸರಿರುವ ಪೋಸ್ಟರ್‌ ಇಂದು ಬಿಡುಗಡೆಯಾಗಿದೆ.

-masthmagaa.com

Contact Us for Advertisement

Leave a Reply