ಜಗನ್ ಸೈಕೋ ರೀತಿ ವರ್ತಿಸುತ್ತಿದ್ದಾರೆ: ಚಂದ್ರಬಾಬು ನಾಯ್ಡು ಕೆಂಡ

ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಓರ್ವ ಸೈಕೋ ಅಂತ ಮಾಜಿ ಸಿಎಂ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಕೆಂಡಕಾರಿದ್ದಾರೆ. ವಿಶಾಖಪಟ್ಟಣಂನಲ್ಲಿ ಮಾತನಾಡಿದ ಅವರು, ಜಗನ್ ನೇತೃತ್ವದ ಹೊಸ YSRCP ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ. ವಿಪಕ್ಷಗಳ ವಿರುದ್ಧ ಅನಗತ್ಯ ಮತ್ತು ಕಾನೂನು ಬಾಹಿರವಾಗಿ ಕೇಸ್‍ಗಳನ್ನು ದಾಖಲಿಸಲಾಗುತ್ತಿದೆ. ಪೊಲೀಸರು ಕೂಡ ಸುಖಾಸುಮ್ಮನೆ ತೊಂದರೆ ನೀಡುತ್ತಿದ್ದಾರೆ. ಸಿಎಂ ಜಗನ್ ಸೈಕೋ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

YSRCP ಆಡಳಿತ ತುಂಬಾ ಕೆಟ್ಟದಾಗಿದೆ. ಪಕ್ಷದ ಕಾರ್ಯಕರ್ತರು ಜಗನ್ ಟ್ಯಾಕ್ಸ್ ಕಲೆಕ್ಟ್ ಮಾಡ್ತಿದ್ದಾರೆ. ನಾನು ತುಂಬಾ ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದ್ರೆ ಇಂತಹ ಮುಖ್ಯಮಂತ್ರಿಯನ್ನು ನಾನು ಈವರೆಗೆ ನೋಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು ಎಂದಿದ್ದಾರೆ. ಜೊತೆಗೆ ಸರ್ಕಾರ ಈ ವರ್ತನೆಯನ್ನು ನಿಲ್ಲಿಸಬೇಕು ಎಂದು ವಾರ್ನಿಂಗ್ ಕೊಟ್ಟಿದ್ದಾರೆ.

Contact Us for Advertisement

Leave a Reply