ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಚಿದಂಬರಂ..! ಸಿಗುತ್ತಾ ಜಾಮೀನು..?

ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜೈಲು ಸೇರಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸೋಮವಾರವಷ್ಟೇ ದೆಹಲಿ ಹೈಕೋರ್ಟ್ ಚಿದಂಬರಂ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಚಿದಂಬರಂ ಪರ ವಕೀಲರು ದೆಹಲಿ ಹೈಕೊರ್ಟ್ ಆದೇಶ ಪ್ರಶ್ನಿಸಿ ಇವತ್ತು ಸುಪ್ರೀಂಕೊರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾ.ರಮಣ ನೇತೃತ್ವದ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಕಪಿಲ್ ಸಿಬಲ್, ಅರ್ಜಿಯನ್ನು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ. ಆದ್ರೆ ಈ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಪೀಠದ ಮುಂದಿಡೋದಾಗಿ ನ್ಯಾ.ರಮಣ ನೇತೃತ್ವದ ಪೀಠ ತಿಳಿಸಿದೆ.

ಚಿದಂಬರಂ ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿಯನ್ನು ನಿರಾಕರಿಸಿತ್ತು. ಈ ಪ್ರಕರಣದಲ್ಲಿ ಚಿದಂಬರಂ ಅವರು ಸೆಪ್ಟೆಂಬರ್ 5ರಿಂದ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದಾರೆ.

Contact Us for Advertisement

Leave a Reply