ರಾಜ್ಯದಲ್ಲಿ ಮಳೆ, ಪ್ರವಾಹ ಸಂತ್ರಸ್ಥರಿಗೆ ಪರಿಹಾರ ಘೋಷಿಸಿದ ಸಿಎಂ!

masthmagaa.com:

ಇವತ್ತು ಗೃಹಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ ಸಭೆ ನಡೆಸಿದ್ರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದಾಗಿ 13 ಜಿಲ್ಲೆಗಳ 446 ಗ್ರಾಮಗಳಿಗೆ ತೊಂದ್ರೆಯಾಗಿದೆ. 13 ಮಂದಿ ಪ್ರಾಣ ಬಿಟ್ಟಿದ್ದಾರೆ. ರಾಜ್ಯ ಸರ್ಕಾರದಿಂದ 510 ಕೋಟಿ ರೂಪಾಯಿ ಮತ್ತು ಎನ್​​ಡಿಆರ್​​​ಎಫ್​​ನಿಂದ 150 ಕೋಟಿ ರೂಪಾಯಿ ಸೇರಿದಂತೆ ಒಟ್ಟು 660 ಕೋಟಿ ತುರ್ತು ಪರಿಹಾರಕ್ಕಾಗಿ ಬಿಡುಗಡೆ ಮಾಡಲಾಗುತ್ತೆ. ಇನ್ನು ಕಂಪ್ಲೀಟಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ, ಭಾಗಶಃ ಹಾನಿಯಾದ್ರೆ 3 ಲಕ್ಷ ಪರಿಹಾರ ನೀಡ್ತೀವಿ. ಇನ್ನೊಂದು ವಾರದಲ್ಲಿ ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಿ, ವರದಿ ನೀಡುವಂತೆ ಸೂಚಿಸಿದ್ದೀವಿ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply