ಕೊರೋನಾ: ಒಡಿಶಾದಲ್ಲಿ ಜಿಮ್, ಈಜುಕೊಳ, ಚಿತ್ರಮಂದಿರಕ್ಕೂ ಬಿತ್ತು ಬೀಗ..!

masthamagaa.com:

ದೇಶದಲ್ಲಿ ಕೊರೋನಾ ವೈರಸ್​ಗೆ ಮೊದಲ ವ್ಯಕ್ತಿ ಬಲಿಯಾದ ಬೆನಲ್ಲೇ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೋಂಕು​ ಹರಡದಂತೆ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಇದರ ನಡುವೆಯೇ ಒಡಿಶಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾರ್ಚ್​ 31ರವರೆಗೆ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದ್ರೆ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಅಂತ ಒಡಿಶಾ ಸಿಎಂ ನವೀನ್ ಪಟ್ನಾಯಕ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಅಷ್ಟಕ್ಕೇ ಸೀಮಿತವಾಗದೆ ಚಿತ್ರಮಂದಿರ, ಜಿಮ್ ಹಾಗೂ ಈಜುಕೊಳಗಳನ್ನು ಕೂಡ ಮಾರ್ಚ್​ 31ರವರೆಗೆ ಬಂದ್ ಮಾಡುವಂತೆ ಆದೇಶಿಸಿದ್ದಾರೆ.

ಇನ್ನು ದೆಹಲಿ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಚಿತ್ರಮಂದಿರಗಳಿಗೆ ಬೀಗ ಬಿದ್ದಿವೆ. ಬೆಂಗಳೂರಿನಲ್ಲಿ 1ರಿಂದ 6ನೇ ತರಗತಿವರೆಗಿನ ಎಲ್ಲಾ  ಮಕ್ಕಳಿಗೆ ರಜೆ ನೀಡಲಾಗಿದೆ. ದೇಶದಲ್ಲಿ ಇದುವರೆಗೆ 73 ಜನರಲ್ಲಿ ಕೊರೋನಾ ವೈರಸ್​ ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಸೋಂಕಿತರನ್ನು ತೀವ್ರ ನಿಗಾದಲ್ಲಿ ಇಡಲಾಗಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚಿ ನಿಗಾ ಇಡುವ ಕೆಲಸ ನಡೀತಿದೆ.

-masthamagaa.com

Contact Us for Advertisement

Leave a Reply