ಬೆಳಗಾವಿಯಲ್ಲಿ ಮೋಡ ಬಿತ್ತನೆ ಆರಂಭ! ರಾಜ್ಯಾದ್ಯಂತ ವಿಸ್ತರಣೆಗೆ ಚಿಂತನೆ?

masthmagaa.com:

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ರಿಂದ ಬರಗಾಲ ಆವರಿಸಿಕೊಂಡಿದ್ದು, ಜನರು ಕಂಗಾಲಾಗಿದ್ದಾರೆ. ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನಿನ್ನೆ ಮೋಡ ಬಿತ್ತನೆ ಕಾರ್ಯ ನಡೆಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಸತೀಶ ಜಾರಕಿಹೊಳಿ ಮೋಡ ಬಿತ್ತನೆಗೆ ಮುಂದಾಗಲು ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯಲು 20 ದಿನಗಳನ್ನು ತೆಗೆದುಕೊಂಡಿದ್ದೇನೆ. ಗೋಕಾಕ ಮತ್ತು ಖಾನಾಪುರ ವಲಯದ ಆಕಾಶದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ವಾರಾಂತ್ಯದಲ್ಲಿ ಜಿಲ್ಲೆಯ ಇತರ ಭಾಗಗಳಲ್ಲಿ ನಡೆಯಲಿದೆ. ಮೋಡ ಬಿತ್ತನೆ ಪ್ರತಿದಿನ ಮೂರು ಗಂಟೆಗಳ ಕಾಲ ನಡೆಯಲಿದ್ದು, ಬಳಿಕ ಒಣ ಪ್ರದೇಶಗಳಲ್ಲಿ ಮಳೆಯಾದರೆ ಉತ್ತಮ ಅಂತ ಹೇಳಿದ್ದಾರೆ. ಇದೇ ವೇಳೆ ಮೋಡ ಬಿತ್ತನೆ ಕಾರ್ಯ ಯಶಸ್ವಿಯಾಗಿ, ಸರ್ಕಾರದಿಂದ ಅನುಮೋದನೆ ಸಿಕ್ಕರೆ ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ ಕಾವೇರಿ ಜಲಾನಯನ ಪ್ರದೇಶದ ಮಡಿಕೇರಿ ಮತ್ತು ಹಾಸನ ಪ್ರದೇಶಗಳಲ್ಲಿ ಮೋಡ ಬಿತ್ತನೆ ಕೈಗೊಳ್ಳಲಾಗುವುದು ಅಂತ ಸತೀಶ್‌ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply