ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ವಜಾ?

masthmagaa.com:

ಜೆಡಿಎಸ್‌-ಬಿಜೆಪಿ ಮೈತ್ರಿ ಘೋಷಣೆಯಾದ ಬಳಿಕ ಜೆಡಿಎಸ್‌ ಪಕ್ಷದಲ್ಲಿ ಉಂಟಾಗಿರೋ ಅಸಮಾಧಾನ ಕಂಟಿನ್ಯೂ ಆಗಿದೆ. ಬಿಜೆಪಿ ಜೊತೆಗಿನ ದೋಸ್ತಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸಿಡಿದೆದ್ದಿದ್ದಾರೆ. ಇತ್ತ ಸಿಎಂ ಇಬ್ರಾಹಿಂ ಅವರು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಅನ್ನೊ ಪತ್ರಿಕಾ ಪ್ರಕಟಣೆಯೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಅವರನ್ನುವಜಾಗೊಳಿಸಲಾಗಿದೆ ಅಂತ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ ಅವರ ಲೆಟರ್​ ಹೆಡ್ ಜೊತೆ ಸೈನ್‌ ಇರೋ ಪತ್ರಿಕಾ ಪ್ರಕಟಣೆ ವೈರಲ್ ಆಗಿದೆ. ಮೇಲ್ನೋಟಕ್ಕೆ ಇದೊಂದು ನಕಲಿ ಪತ್ರ ಅನ್ನೋದು ಗೊತ್ತಾಗಿದೆ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಉಚ್ಛಾಟನೆ ಪತ್ರ ವೈರಲ್ ಮಾಡಿದ್ದಕ್ಕೆ ಜೆಡಿಎಸ್​ ಕಾರ್ಯಕರ್ತರು ಇಬ್ರಾಹಿಂ ಅವರನ್ನು ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸಲಾಗಿದೆ ಅನ್ನೋ ಫೇಕ್‌ ಪತ್ರ ಸೃಷ್ಟಿಸಿ ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ಇತ್ತ ಈ ಲೆಟರ್‌ ವೈರಲ್‌ ಆದ ಬೆನ್ನಲ್ಲೇ ಇಬ್ರಾಹಿಂ ಜೆ.ಸಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಕಲಿ ಪತ್ರ ವೈರಲ್ ಆಗಿರೋದ್ರಿಂದ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಆಗಿದೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಅಂತ ದೂರಿನಲ್ಲಿ ಮನವಿ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply