masthmagaa.com:

ಕೆಎಸ್ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸುಮಾರು 1,30,000 ಸಿಬ್ಬಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಕೊಡಬೇಕಾಗಿರುವ ವೇತನವನ್ನ ಪಾವತಿ ಮಾಡಲು 634.50 ಕೋಟಿ ರೂಪಾಯಿ ಬಿಡುಗಡೆ ಮಾಡಲು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಅಂತ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಅಂದ್ಹಾಗೆ ಕೊರೋನಾ ಹಿನ್ನೆಲೆ ಪ್ರಯಾಣಿಕರಿಲ್ಲದೆ ಸಾರಿಗೆ ಸಂಸ್ಥೆಗಳು ಸಾಕಷ್ಟು ನಷ್ಟ ಅನುಭವಿಸಿದ್ದವು. ಲಾಕ್​ಡೌನ್ ತೆರವು ಮಾಡಿದ​ ನಂತರವೂ ಸಾರಿಗೆ ಸಂಸ್ಥೆಗಳ ಆದಾಯ ಶೇ. 30ರಷ್ಟು ಕೂಡ ದಾಟಿರಲಿಲ್ಲ. ಇದರಿಂದ ಸಿಬ್ಬಂದಿಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ವೇತನ ಕೊಟ್ಟಿರಲಿಲ್ಲ. ಇವತ್ತು ಸಾರಿಗೆ ಸಚಿವ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಈ ಸಂಬಂಧ ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ರು. ಸಚಿವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಡಿಸೆಂಬರ್ ಸೇರಿದಂತೆ ಒಟ್ಟು ಮೂರು ತಿಂಗಳುಗಳ ಶೇ. 75 ರಷ್ಟು ವೇತನದ ಮೊತ್ತವಾದ 634.50 ಕೋಟಿ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಉಳಿದ ಶೇ. 25 ರಷ್ಟು ವೇತನಗಳನ್ನು ಸಾರಿಗೆ ಸಂಸ್ಥೆಗಳೇ ತಮ್ಮ ಸಂಪನ್ಮೂಲಗಳಿಂದ ಭರಿಸಲಿವೆ.

-masthmagaa.com

Contact Us for Advertisement

Leave a Reply