ಕೃಷಿಗೆ ನಿರಂತರ 5 ಗಂಟೆ ವಿದ್ಯುತ್‌ ಪೂರೈಕೆ: ಸಿದ್ದು

masthmagaa.com:

ರಾಜ್ಯದಲ್ಲಿ ವಿದ್ಯುತ್‌ ಕೊರತೆಯಿಂದಾಗಿ ಲೋಡ್‌ ಶೆಡ್ಡಿಂಗ್‌ ಮಾಡ್ತಿದ್ದು, ಇದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಕೃಷಿ ಪಂಪ್‌ಸೆಟ್‌ಗೆ ಕನಿಷ್ಠ 5 ಗಂಟೆ ನಿರಂತರ ವಿದ್ಯುತ್‌ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ನವೆಂಬರ್‌ನಿಂದ ಉತ್ತರ ಪ್ರದೇಶದಿಂದ 300 ಮೆಗಾವ್ಯಾಟ್‌, ಪಂಜಾಬ್‌ ನಿಂದ 600 ಮೆಗಾವ್ಯಾಟ್‌, ಮತ್ತು KERC ಅನುಮೋದನೆಯೊಂದಿಗೆ 1,300-1,500 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply