ಬಿಜೆಪಿ ಸರ್ಕಾರದ ಯೋಜನೆಗಳನ್ನೂ ಕಾಂಗ್ರೆಸ್‌ ಮುಂದುವರೆಸುತ್ತೆ!

masthmagaa.com:

ಸಿಎಂ ಸಿದ್ದರಾಮಯ್ಯನವರು ಜುಲೈ 7ರಂದು ಮಧ್ಯಂತರ ಬಜೆಟ್‌ ಮಂಡಿಸಲಿದ್ದಾರೆ. ಈ ವೇಳೆ ಬಿಜೆಪಿಯ ಹಲವು ಯೋಜನೆಗಳನ್ನು ಸ್ಥಗಿತಗೊಳಿಸಲಿದ್ದಾರೆ ಅನ್ನೊ ಆರೋಪಗಳು ಕೇಳಿಬಂದಿದ್ದವು. ಆದ್ರೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಪ್ರಮುಖ ಕಲ್ಯಾಣ ಯೋಜನೆಗಳನ್ನು ಸಿದ್ದರಾಮಯ್ಯ ಮುಂದುವರೆಸಿಕೊಂಡು ಹೋಗಲಿದ್ದಾರೆ ಎನ್ನಲಾಗಿದೆ. ಅದಲ್ಲದೇ ಎಲ್ಲ ಯೋಜನೆಗಳನ್ನು ಈಡೇರಿಸಲು ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇನ್ನು ರೈತರ ಮಕ್ಕಳಿಗೆ ಸ್ಕಾಲರ್‌ಶಿಫ್‌ ನೀಡುವ ರೈತ ವಿದ್ಯಾನಿಧಿ ಯೋಜನೆ ಹಾಗೂ ಸಿರಿಧಾನ್ಯ ಬೆಳೆಯಲು ರೈತರಿಗೆ 10 ಸಾವಿರ ರೂಪಾಯಿ ಸಹಾಯ ಧನ ನೀಡುವ ರೈತ ಸಿರಿ ಯೋಜನೆಯನ್ನ ಮುಂದುವರಿಸುವ ಕುರಿತು ಸಿದ್ದರಾಮಯ್ಯ ಮಾತಾಡಿದ್ದಾರೆ. ಹೀಗಾಗಿ ರೈತ ವಿದ್ಯಾನಿಧಿ ಯೋಜನೆಗೆ 700 ಕೋಟಿ ರೂಪಾಯಿ ಹಾಗೂ ರೈತ ಸಿರಿ ಯೋಜನೆಗೆ 600 ಕೋಟಿ ರೂಪಾಯಿ ಅಗತ್ಯವಿದೆ. ಬಡವರು ಹಾಗೂ ರೈತರಿಗೆ ಅನುಕೂಲವಾಗುವ ಯಾವುದೇ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಅಂತ ಸಿಎಂ ರಾಜಕೀಯ ಕಾರ್ಯದರ್ಶಿ ನಾಸೀರ್‌ ಅಹ್ಮದ್‌ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply