masthmagaa.com:

ಕೊರೋನಾ ಪಾಸಿಟಿವ್ ಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್​. ಯಡಿಯೂರಪ್ಪ ಗುಣಮುಖರಾಗಿದ್ದಾರೆ. ಅವರ ಕೋವಿಡ್ ರಿಪೋರ್ಟ್​ ನೆಗೆಟಿವ್ ಬಂದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರನ್ನು ಆಗಸ್ಟ್​ 2ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಿಎಸ್​​ವೈಗೆ ಕೊರೋನಾ ಪಾಸಿಟಿವ್ ಬಂದರೂ ಸೋಂಕಿನ ಲಕ್ಷಣಗಳು ಇರಲಿಲ್ಲ. ಹೀಗಾಗಿ ಅವರು ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸವನ್ನು ವೈದ್ಯರು ವ್ಯಕ್ತಪಡಿಸಿದ್ದರು. ಇದೀಗ 9 ದಿನಗಳ ಆಸ್ಪತ್ರೆವಾಸ ಮುಗಿಸಿರುವ ಯಡಿಯೂರಪ್ಪ ‘ಕಾವೇರಿ’ ನಿವಾಸಕ್ಕೆ ವಾಪಸ್ ಆಗಿದ್ದಾರೆ. ಮೂರು ದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗ್ತಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಇನ್ನೂ ಮಣಿಪಾಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಅವರನ್ನು ಆಗಸ್ಟ್​ 3ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

-masthmagaa.com

Contact Us for Advertisement

Leave a Reply