ರಾಜ್ಯದ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ.. ಈ ಜಿಲ್ಲೆಗಳಲ್ಲಿ ಹೈ ಅಲರ್ಟ್..!

masthmagaa.com:

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 6ರಿಂದ 10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಭಾಗದಲ್ಲೂ ಸೆಪ್ಟೆಂಬರ್ 6ರಿಂದ 10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಚಾಮರಾಜನಗರ, ಮೈಸೂರು, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6,7,8ರಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನು ಉತ್ತರ ಒಳನಾಡು ಭಾಗದಲ್ಲಿ ಸೆಪ್ಟೆಂಬರ್​ 6 ಮತ್ತು 7ರಂದು ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

-masthmagaa.com

Contact Us for Advertisement

Leave a Reply