masthmagaa.com:

ಡ್ರಗ್ ಸಂಬಂಧಿತ ಆರೋಪದಲ್ಲಿ ಅರೆಸ್ಟ್ ಆಗಿರುವ ಬಾಲಿವುಡ್ ನಟಿ ರಿಯಾ ಚಕ್ರಬರ್ತಿ ಜಾಮೀನು ಪಡೆದು ಜೈಲಿನಿಂದ ಹೊರಬರಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಈ ಸಂಬಂಧ ಕೋರ್ಟ್​ಗೆ ಬೇಲ್ ಅರ್ಜಿ ಸಲ್ಲಿಸಿರುವ ರಿಯಾ ಚಕ್ರಬರ್ತಿ, ‘ಪ್ರಕರಣದಲ್ಲಿ ತಪ್ಪೊಪ್ಪಿಕೊಳ್ಳುವಂತೆ ನನ್ನನ್ನು ಒತ್ತಾಯಿಸಲಾಗ್ತಿದೆ’ ಅಂತ ಹೇಳಿದ್ದಾರೆ. ಈ ಮೂಲಕ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯುರೊ (NCB) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಇದರ ಜೊತೆಗೆ ನ್ಯಾಯಾಂಗ ಬಂಧನದಲ್ಲಿ ತನ್ನ ಜೀವಕ್ಕೆ ಅಪಾಯವಿದೆ. ಅಷ್ಟೇ ಅಲ್ಲ ಅತ್ಯಾಚಾರ ಮತ್ತು ಜೀವ ಬೆದರಿಕೆಗಳು ಕೂಡ ಬಂದಿವೆ. ಸಿಬಿಐ, ಇಡಿ ಮತ್ತು ಎನ್​ಸಿಬಿ ಹೀಗೆ ಕೇಂದ್ರದ ಮೂರು ಸಂಸ್ಥೆಗಳ ತನಿಖೆಯಿಂದ ಮಾನಸಿಕ ಆರೋಗ್ಯಕ್ಕೆ ತೀವ್ರ ಹಾನಿಯುಂಟಾಗಿದೆ. ನಾನು ಯಾವುದೇ ಅಪರಾಧ ಮಾಡಿಲ್ಲ. ನನ್ನನ್ನ ಈ ಪ್ರಕರಣದಲ್ಲಿ ತಪ್ಪಾಗಿ ತಳಕು ಹಾಕಲಾಗಿದೆ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ 28 ವರ್ಷದ ರಿಯಾ ಚಕ್ರಬರ್ತಿ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

-masthmagaa.com

Contact Us for Advertisement

Leave a Reply