masthmagaa.com:

ಕೊರೋನಾ ಹಾವಳಿಯಿಂದ ಬಂದ್ ಆಗಿರುವ ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳು ಡಿಸೆಂಬರ್ 1ರಿಂದ ಪುನಾರಂಭ ಆಗಲಿವೆ ಅಂತ ರಾಜ್ಯ ಸರ್ಕಾರ ಘೋಷಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡುವ ಮೂಲಕ ಈ ವಿಚಾರವನ್ನು ತಿಳಿಸಿದ್ದಾರೆ. ಕಾಲೇಜು ಪುನಾರಂಭ ಸಂಬಂಧ ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಬೇಕು ಅಂತಾನೂ ಸೂಚಿಸಲಾಗಿದೆ. ರಾಜ್ಯದಲ್ಲಿ ಡಿಗ್ರಿ, ಪಿಜಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳು ನವೆಂಬರ್ 17ರಿಂದ ಆರಂಭವಾಗಲಿವೆ. ಇದೀಗ RGUHS ಅಡಿಯಲ್ಲಿ ಬರುವ ಕಾಲೇಜುಗಳನ್ನ ಡಿಸೆಂಬರ್ 1ರಿಂದ ಆರಂಭ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

-masthmgaa.com

Contact Us for Advertisement

Leave a Reply