ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿಯಾಗಿ ಬೆಂಗಳೂರಿನಲ್ಲಿ ಜನಸಾಹಿತ್ಯ ಸಮ್ಮೇಳನ! ಯಾಕೆ?

masthmagaa.com:

ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಇದೇ ವೇಳೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಬೆಂಗಳೂರಿನಲ್ಲಿ ಭಾನುವಾರ ಅಂದ್ರೆ ನಾಳೆ ಜನಸಾಹಿತ್ಯ ಸಮ್ಮೇಳನ ನಡೆಯಲಿದೆ. ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿ, ಪ್ರಗತಿಪರರು, ಚಿಂತಕರು ಹಾಗೂ ಕೆಲ ಕನ್ನಡ ಪರ ಸಂಘಟನೆಗಳು ಒಗ್ಗೂಡಿ ಈ ಸಾಹಿತ್ಯ ಸಮ್ಮೇಳನವನ್ನ ಆಯೋಜಿಸಿದ್ದಾರೆ. ಜನವರಿ 8 ರಂದು ಬೆಂಗಳೂರಿನ ಕೆ ಆರ್‌ ವೃತ್ತದ ಅಲುಮ್ನೈ ಅಸೋಸಿಯೇಷನ್‌ ಆವರಣದಲ್ಲಿರೊ ಸಂತ ಶಿಶುನಾಳ ಶರೀಫ ಮತ್ತು ಗುರುಗೋವಿಂದ ಭಟ್ಟ ಸಭಾಂಗಣದಲ್ಲಿ ಜನಸಾಹಿತ್ಯ ಸಮ್ಮೇಳನ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದಲೇ ಸಮ್ಮೇಳನ ಆರಂಭವಾಗಲಿದ್ದು, ವಾಟಾಳ್‌ ನಾಗರಾಜ್‌, ಶಿವರಾಮೇಗೌಡ, ಬಿ ಎನ್‌ ಜಗದೀಶ್‌ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ. ಇನ್ನೊಂದ್‌ ಕಡೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಮಾತಾಡಿ, ಕನ್ನಡ ಭಾಷೆ ವಿಚಾರವಾಗಿ ಸರ್ಕಾರ ನಡೆದುಕೊಂಡ ರೀತಿಯನ್ನ ಖಂಡಿಸಿದ್ದಾರೆ. ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿರೊ ಅಧ್ಯಕ್ಷ ದೊಡ್ಡರಂಗೇಗೌಡರು, ಬಿಜೆಪಿ ಸರ್ಕಾರ ಡಬಲ್‌ ಎಂಜಿನ್‌ ಸರ್ಕಾರದ ಅನುಕೂಲತೆಗಳ ಬಗ್ಗೆ ಪದೇ ಪದೇ ಹೇಳುತ್ತಲೇ ಇರುತ್ತೆ. ಆದ್ರೆ ಈ ಸರ್ಕಾರ ಕನ್ನಡ ಭಾಷೆಗೆ ಏನು ಮಾಡಿದೆ ಅಂತ ಪ್ರಶ್ನಿಸಿದ್ದಾರೆ.

-masthmagaa.com

Contact Us for Advertisement

Leave a Reply